ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಬನ್ನೇರುಘಟ್ಟ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ.
ಬನೇರುಘಟ್ಟ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪುನೀತ್ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಸೇರಿದಂತೆ ಇತರರ ವಿರುದ್ಧ ಕೇಸ್ ದಾಖಲಾಗಿದೆ.
ಎಸ್.ಬೆಂಗೀಪುರದಲ್ಲಿ ಅಕ್ರಮ ವಲಸಿಗರ ಶೆಡ್‌ಗಳ ಮೇಲೆ ದಾಖಲೆ ಕೇಳಿ ದಾಳಿ ನಡೆಸಲಾಗಿತ್ತು. ಜಾಗದ ಮಾಲೀಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿತ್ತು.
ಜೀವ ಬೆದರಿಕೆ ಹಾಕಿರುವುದಾಗಿ ಪುನೀತ್ ಹಾಗೂ ಸಹಚರರ ವಿರುದ್ಧ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.





