ಮೈಸೂರು: ಮಹಾರಾಷ್ಟ್ರದ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರು ಮಾಜಿ ಮೇಯರ್ ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಿಎಂ ದೇವೇಂದ್ರ ಫಡ್ನವೀಸ್, ಡಿಸಿಎಂ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರವೂ ಕೂಡ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಮುಂಬೈ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವುದರಿಂದ ತ್ರಿಬಲ್ ಇಂಜಿನ್ ಸರ್ಕಾರವಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.
ಇನ್ನು ಚುನಾವಣೆಗಳ್ಲಲಿ ಸೋತರೂ ಇವಿಎಂ ಮೇಲೆ ಗೂಬೆ ಕೂರಿಸುವ ಕಾಂಗ್ರೆಸ್ ನಾಯಕರು ಜನರ ತೀರ್ಪಿಗೆ ತಲೆಬಾಗಬೇಕು. ಮಹಾರಾಷ್ಟ್ರದ ಜನರು ಬುದ್ದಿವಂತರು. ಕಾಂಗ್ರೆಸ್ ಮಾಡುವ ಆರೋಪವನ್ನು ನಂಬಿ ಕೂರುವವರಲ್ಲ. ಕಾಂಗ್ರೆಸ್ ನಾಯಕರು ಮುಂದಾದರೂ ಸೋಲಿನ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.





