Mysore
27
broken clouds

Social Media

ಶನಿವಾರ, 17 ಜನವರಿ 2026
Light
Dark

2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ: ಸಚಿವ ಎಚ್‌.ಸಿ.ಮಹದೇವಪ್ಪ

ಮೈಸೂರು: ಮುಂದಿನ 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಿದ್ದಾರೆ, ಅಸ್ಸಾಂ ಚುನಾವಣೆಯ ವೀಕ್ಷಕರಾಗಿದ್ದಾರೆ. ಹೀಗಾಗಿ ದೆಹಲಿಗೆ ಹೋಗಿದ್ದಾರೆ ಇದಕ್ಕೆ ಯಾವ ವಿಶೇಷ ಅರ್ಥಗಳು ಬೇಡ. ಮುಂದಿನ 2028ರವರೆಗೆ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ. ಬಿಜೆಪಿಯವರು ಸುಮ್ಮನೆ ಏನೋ ಆಗುತ್ತದೆ ಎಂದು ಕಾಯುತ್ತಿದ್ದಾರೆ ಬಿಜೆಪಿ ಯಾವಾಗಲೂ ಪರಿಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿಲ್ಲ. ಹೀಗಾಗಿ ಇಂತಹ ಸಂಧರ್ಭಗಳನ್ನು ಅವರು ಕಾಯುತ್ತಿರುತ್ತಾರೆ. ನಂತರ ಕೈಗೆ ಸಿಗದ ದ್ರಾಕ್ಷಿ ಹುಳಿ ಎಂದುಕೊಂಡು ಹೋಗುತ್ತಾರೆ. ಇದು ಕೂಡ ಅಷ್ಟೇ ಎಂದು ಹೇಳಿದರು.

ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಿಂದಿನ ಚುನಾವಣೆಗಳಲ್ಲಿ ಅನಧಿಕೃತ ಹೊಂದಾಣಿಕೆಯಲ್ಲಿದ್ದರು. ಈ ಚುನಾವಣೆಯಲ್ಲಿ ಅಧಿಕೃತ ಹೊಂದಾಣಿಕೆಯಲ್ಲಿದ್ದಾರೆ. ಇದರಲ್ಲಿ ಬೇರೆ ವ್ಯತ್ಯಾಸಗಳು ಇಲ್ಲ. ಇದು ಕಾಂಗ್ರೆಸ್ ಮೇಲೆ ಯಾವ ಪರಿಣಾಮ ಬೀರುವುದಿಲ್ಲ ಎಂದರು.

Tags:
error: Content is protected !!