Mysore
18
scattered clouds

Social Media

ಶನಿವಾರ, 17 ಜನವರಿ 2026
Light
Dark

ನೀವೇನು ಮಾಡ್ತಿದ್ರಿ..? ಮೈಸೂರಲ್ಲಿ ಡ್ರಗ್ಸ್‌ ಪ್ಯಾಕ್ಟರಿ ಪತ್ತೆ ಪ್ರಕರಣದಲ್ಲಿ ರಾಜ್ಯ ಪೊಲೀಸರಿಗೆ ಸಿಎಂ ಪ್ರಶ್ನೆ

ಬೆಂಗಳೂರು : ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಡ್ರಗ್ಸ್‌ಗೆ ಕಡಿವಾಣ ಹಾಕಿ, ಮಾದಕ ವಸ್ತು ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಿನ ಅಧಿವೇಶದನಲ್ಲಿ ಹೊಸ ಕಾನೂನು ಜಾರಿಗೊಳಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪೊಲೀಸ್ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಗೃಹ ಇಲಾಖೆ ಶನಿವಾರ ಆಯೋಜಿಸಿದ್ದ ಪೊಲೀಸ್ ಅಽಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ಜೈಲುಗಳಲ್ಲಿ ಅವ್ಯವಸ್ಥೆ ಪ್ರಕರಣಗಳನ್ನು ಸಹಿಸಲ್ಲ ಎಂದು ಎಚ್ಚರಿಸಿದರು.

ರಾಜ್ಯವನ್ನು ಡ್ರಗ್ಸ್ ಮುಕ್ತಮಾಡಲು ವ್ಯಸನಿ ವಿಚಾರಣೆ ಮಾಡಿದರೆ ಮೂಲ ಮಾಹಿತಿ ಸಿಗುತ್ತದೆ. ಪೆಡ್ಲರ್ ವಿಚಾರಣೆ ಮಾಡಿದರೆ ಎಲ್ಲಿಂದ ಡ್ರಗ್ಸ್ ಬಂತು ಅಂತಾ ಗೊತ್ತಾಗುತ್ತೆ. ಅಪರಾಧದಲ್ಲಿ ಭಾಗಿಯಾದ ವಿದೇಶಿಯರನ್ನು ಅವರ ದೇಶಕ್ಕೆ ವಾಪಸ್ ಕಳಿಸುವ ಕೆಲಸ ಮಾಡುತ್ತೇವೆ. ಪಿಐ, ಪಿಎಸ್‌ಐ ಸೇರಿ ಎಲ್ಲರ ಮೇಲೂ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.

ಮಹಾರಾಷ್ಟ್ರದ ಪೊಲೀಸರು ಬಂದು ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಮಾಡಿದ್ದಾರೆ. ಅದನ್ನು ಕರ್ನಾಟಕ ಪೊಲೀಸರು ಏಕೆ ಮಾಡುತ್ತಿಲ್ಲ. ಈ ರೀತಿ ಇನ್ನುಮುಂಂದೆ ಆಗಬಾರದು ಎಂದು ಪೊಲೀಸರಿಗೆ ಖಡಕ್ಕಾಗಿ ಹೇಳಿದರು.
ಇದೇ ರೀತಿ ಸೈಬರ್ ಅಪರಾಧಗಳು ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕಿದೆ ಎಂದರು.

ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ರಕ್ಷಣೆಯನ್ನು ಒದಗಿಸಿದೆ. ಎಲ್ಲರಿಗೂ ಕಾನೂನು ಒಂದೇ. ಯಾರು ತಪ್ಪು ಮಾಡಿದರೂ ಅದು ತಪ್ಪೇ. ಬಲಾಢ್ಯರು, ಸಮಾಜಘಾತುಕ ಶಕ್ತಿಗಳಿಗೆ ಯಾವುದೇ ಕಾರಣಕ್ಕೂ ಮಣೆ ಹಾಕಬಾರದು. ದುರ್ಬಲರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರು, ಧಾರ್ಮಿಕ ಅಲ್ಪಸಂಖ್ಯಾತರ ರಕ್ಷಣೆ ಎಲ್ಲರ ಹೊಣೆ. ದುರ್ಬಲರು ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ಒಳಗಾಗಬಾರದು. ಪ್ರತಿಯೊಬ್ಬರಿಗೂ ಸಮಾನ ನ್ಯಾಯ ಒದಗಿಸುವುದು ಪೊಲೀಸರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ತಹಸಿಲ್ದಾರ್ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ತಾಲ್ಲೂಕಿನಲ್ಲಿ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಇದೇ ರೀತಿ ಜಿಲ್ಲೆಯಲ್ಲಿ ಜಿಲ್ಲಾಽಕಾರಿ, ಎಸ್‌ಪಿ ಮತ್ತು ಸಿಇಒ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ಜಿಲ್ಲೆಯ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಆದರೆ ಕೆಲವು ಪೊಲೀಸ್ ಠಾಣೆಗಳಲ್ಲಿ ಕೆಲವು ಅಽಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣಕ್ಕೆ ಜನರು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.

ಕೊಲೆ, ಸುಲಿಗೆ, ಡಕಾಯಿತಿ, ದರೋಡೆ ಪ್ರಕಣಗಳ ಸಂಖ್ಯೆಯಲ್ಲಿ ಕಳೆದ ಒಂದು ವರ್ಷದಲ್ಲಿ ಕಡಿಮೆಯಾಗಿದೆ. ಆದರೆ ಸೈಬರ್ ಅಪರಾಧ, ಡ್ರಗ್ಸ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದನ್ನು ಮಟ್ಟ ಹಾಕಲು ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರು.

ನಮ್ಮ ರಾಜ್ಯದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಕನ್ವಿಕ್ಷನ್ ದರ ಕಡಿಮೆಯಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶಿಕ್ಷೆಯನ್ನು ಖಾತ್ರಿಪಡಿಸುವಲ್ಲಿ ಪೊಲೀಸರ ಪಾತ್ರ ಮುಖ್ಯವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕನ್ವಿಕ್ಷನ್ ಪ್ರಮಾಣ ಕಳೆದ ವರ್ಷ ಶೇ.೩ರಷ್ಟಿತ್ತು. ಈಗ ಶೇ.೧೨ ಕ್ಕೆ ಸುಧಾರಿಸಿದ್ದು, ಇದನ್ನು ಇನ್ನಷ್ಟು ಉತ್ತಮಪಡಿಸಬೇಕಿದೆ ಎಂದರು.

ಅಪರಾಧವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅಪರಾಧ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಕಳೆದ ಸಾಲಿನಲ್ಲಿ ೮೮ ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Tags:
error: Content is protected !!