Mysore
17
broken clouds

Social Media

ಶನಿವಾರ, 17 ಜನವರಿ 2026
Light
Dark

Womens IPL | ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್‌

ಮುಂಬೈ : ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಆಲ್‌ರೌಂಡರ್ ಶ್ರೇಯಾಂಕಾ ಪಾಟೀಲ್ 5 ವಿಕೆಟ್ ಕಬಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಐದು ವಿಕೆಟ್‌ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ನವಿ ಮುಂಬೈನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್‌ನ 9ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 3.5 ಓವರ್ ಎಸೆದ ಶ್ರೇಯಾಂಕಾ ಪಾಟೀಲ್ ಕೇವಲ 23 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ಐಪಿಎಲ್ ನಲ್ಲಿ 5 ವಿಕೆಟ್ ಕಬಳಿಸಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆ 23 ವರ್ಷದ ಶ್ರೇಯಾಂಕಾ ಪಾಲಾಯಿತು.

ಅಷ್ಟೇ ಅಲ್ಲದೆ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೂರು ಬಾರಿ 4 ವಿಕೆಟ್ ಕಬಳಿಸಿದ ಬೌಲರ್ ಎಂಬ ಹಿರಿಮೆಗೂ ಪಾತ್ರರಾದರು. ಅಂದರೆ ಶ್ರೇಯಾಂಕಾ ಪಾಟೀಲ್ ಐಪಿಎಲ್‌ನಲ್ಲಿ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದಿರುವುದು ಇದು ಮೂರನೇ ಬಾರಿ.

2024ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಶ್ರೇಯಾಂಕಾ ಪಾಟೀಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ಓವರ್‌ಗಳಲ್ಲಿ 26 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ 2024ರ ಐಪಿಎಲ್ ಫೈನಲ್ಸ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದವೇ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದಿದ್ದರು.

 

 

Tags:
error: Content is protected !!