ಬೆಂಗಳೂರು : ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್‌ಸಿಎ)ಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದ್ದು, ನ್ಯಾಯಮೂರ್ತಿ ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ. ಸರ್ಕಾರ, ಸಂಬಂಧಿತ ಅಧಿಕಾರಿಗಳು ನಿಗದಿಪಡಿಸಿರುವ ನಿರ್ದಿಷ್ಟ ಷರತ್ತುಗಳು, ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಅನುಮತಿ ನೀಡಲಾಗಿದೆ.
ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.





