ಮೈಸೂರು ವಿಶ್ವವಿದ್ಯಾನಿಲಯದ ಒಡೆತನದಲ್ಲಿರುವ ಕುಕ್ಕರಹಳ್ಳಿ ಕೆರೆ ಪರಿಸರದಲ್ಲಿ ವಾಯುವಿಹಾರ ಮಾಡುವುದಕ್ಕೆ ಪ್ರತಿದಿನ ನೂರಾರು ಜನರು ಬರುತ್ತಾರೆ. ಕೆಲವು ವಿಶೇಷ ದಿನಗಳಲ್ಲಿ ಮತ್ತು ಸರ್ಕಾರಿ ರಜೆ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಈ ನಡುವೆ ಮುಂಜಾನೆ ೫.೩೦ರ ವೇಳೆ ಕುಕ್ಕರಹಳ್ಳಿ ಕೆರೆಯ ಬಾಗಿಲುಗಳು ತೆರೆಯುತ್ತವೆ. ಈ ಸಮಯದಲ್ಲಿ ಮತ್ತು ಸಂಜೆ ೫.೪೦ರ ಸಮಯಗಳಲ್ಲಿ ಕುಕ್ಕರಹಳ್ಳಿ ಕೆರೆಯ ಕೆಲ ಭಾಗ ಗಳಲ್ಲಿ ಕತ್ತಲಾವರಿಸುತ್ತದೆ. ಆದ್ದರಿಂದ ಸಂಬಂಧಪಟ್ಟ ಮೈಸೂರು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಕುಕ್ಕರಹಳ್ಳಿ ಕೆರೆಯ ಸಂರಕ್ಷಣೆ ಮತ್ತು ಸಾರ್ವಜನಿಕರ ಹಿತಕ್ಕಾಗಿ ಕೆರೆಯಲ್ಲಿರುವ ವಿದ್ಯುತ್ ಕಂಬಗಳಿಗೆ ವಿದ್ಯುತ್ ದೀಪಗಳನ್ನು ಅಳವಡಿಸಬೇಕು ಹಾಗೂ ಕೆರೆಯಲ್ಲಿರುವ ಕೆಲ ವಿದ್ಯುತ್ ಕಂಬಗಳಲ್ಲಿ ದೀಪಗಳಿದ್ದರೂ ಬೆಳಗುತ್ತಿಲ್ಲ. ಸಂಬಂಧಪಟ್ಟವರು ಕೂಡಲೇ ಕುಕ್ಕರಹಳ್ಳಿ ಕೆರೆಯ ಬಳಿ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





