ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷರೂ, ಮಾಜಿ ಸಚಿವರೂ ಆದ ಹಿರಿಯ ರಾಜಕೀಯ ಮುತ್ಸದ್ದಿ, ಭೀಮಣ್ಣ ಖಂಡ್ರೆಯವರ ನಿಧನ ನೋವಿನ ಸಂಗತಿಯಾಗಿದೆ. ವೀರಪ್ಪ ಮೊಯಿಲಿಯವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದ ಖಂಡ್ರೆ ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ನೇರ ನಡೆ, ನೇರ ನುಡಿಗಳಿಗೆ ಹೆಸರಾಗಿದ್ದ ಶ್ರೀಯುತರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು. ೧೦೨ ವರ್ಷಗಳ ಸುದೀರ್ಘ ಮತ್ತು ಸಾರ್ಥಕ ಬದುಕನ್ನು ಸವೆಸಿ ವೀರಶೈವ ಲಿಂಗಾಯತ ಸಮಾಜಕ್ಕೆ ಮಾರ್ಗದರ್ಶಿಯಾಗಿದ್ದರು.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು





