ಮಂಡ್ಯ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ. ಜೆಡಿಎಸ್ ಶಾಸಕ ಎಚ್.ಟಿ.ಮಂಜು ದೂರು ನೀಡಿದ್ದಾರೆ.
ಅಧಿಕಾರಿಗಳ ಜೊತೆ ಸೇರಿ ಸಚಿವರು ಹಾಗೂ ಸಚಿವರ ಪುತ್ರ ಅಕ್ರಮ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಚಿವ ತಿಮ್ಮಾಪುರ ಹಾಗೂ ಪುತ್ರನ ವಿರುದ್ಧ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಟಿ.ಮಂಜು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಿಎಲ್-7 ಸನ್ನದು ಮಂಜೂರು ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದಿದ್ದಾರೆ.
ಸಚಿವ ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಶಾಸಕ ಮಂಜು, ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದಾರೆ.
ದೂರು ಆಧರಿಸಿ ಸಿಎಸ್ ಪರಿಶೀಲನೆಗೆ ಸೂಚಿಸಿದ್ದಾರೆ. ಅಬಕಾರಿ ಆಯುಕ್ತರಿಗೆ ಪತ್ರ ಬರೆದಿರುವ ಸಿಎಸ್ ಶಾಲಿನಿ ರಜನೀಶ್, ದೂರಿನ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ. ಅಲ್ಲದೇ ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.





