Mysore
29
clear sky

Social Media

ಸೋಮವಾರ, 19 ಜನವರಿ 2026
Light
Dark

ದಾವಣಗೆರೆ ಕಿರು ಮೃಗಾಲಯದಲ್ಲಿ ದುರಂತ: ನಾಲ್ಕು ಚುಕ್ಕೆ ಜಿಂಕೆಗಳು ಸಾವು

ದಾವಣಗೆರೆ: ಕೆಲ ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಕಿತ್ತೂರು ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಮೃತಪಟ್ಟಿರುವ ಘಟನೆ ನಡೆದ ಬೆನ್ನಲ್ಲೇ ರಾಜ್ಯದ ಮತ್ತೊಂದು ಕಿರು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ದಾವಣಗೆರೆಯ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ 4 ಚುಕ್ಕೆ ಜಿಂಕೆಗಳು ಮೃತಪಟ್ಟಿವೆ. ಹೆಮರಾಜಿಕ್‌ ಸೆಪ್ಪಿಸೆಮಿಯಾ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಜಿಂಕೆಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃಗಾಲಯದ ಉಳಿದ ಪ್ರಾಣಿಗಳ ಸುರಕ್ಷತೆಯ ದೃಷ್ಟಿಯಿಂದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಮೃಗಾಲಯಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.

ಜನವರಿ.16ರಂದು ಮೃಗಾಲಯದಲ್ಲಿ ಒಂದು ಚುಕ್ಕೆ ಜಿಂಕೆ ಸಾವನ್ನಪ್ಪಿತ್ತು. ಈ ಬಗ್ಗೆ ಪರಿಶೀಲನೆ ನಡೆಸುತ್ತಿರುವಾಗಲೇ ಮರುದಿನ ಮತ್ತೆರಡು ಜಿಂಕೆಗಳು ಸಾವನ್ನಪ್ಪಿವೆ. ಈಗ ಇನ್ನೊಂದು ಜಿಂಕೆ ಸಾವನ್ನಪ್ಪಿದ್ದು, ಒಟ್ಟು ನಾಲ್ಕು ಜಿಂಕೆಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.

ಇನ್ನು ಜಿಂಕೆಗಳ ಸಾವಿನ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಸೋಂಕು ವ್ಯಾಪಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ. ವೈದ್ಯರು ಇತರೆ ಪ್ರಾಣಿಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.

Tags:
error: Content is protected !!