ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆ ಹಾರ ಸಮೀಪದ ಮಲಯ ಮಾರುತ ಬಳಿ ನಡೆದಿದೆ.
ನಿರಂತರ ಬೀಸುತ್ತಿರುವ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದೆ. ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದ್ದು, ಆತಂಕ ಉಂಟು ಮಾಡಿದೆ.
ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸುಪಡುತ್ತಿದ್ದು, ಭಾರಿ ಗಾಳಿಯಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಪರಿಣಾಮ ಅತ್ಯಮೂರ್ಯ ಗಿಡ ಮೂಲಿಕೆ ಸಸ್ಯಗಳು ನಾಶವಾಗಿವೆ. ನೂರಾರು ಪ್ರಾಣಿ-ಪಕ್ಷಿಗಳು ಸಾವನ್ನಪ್ಪಿವೆ.





