ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ವಿರೋಧಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಚಾಮುಂಡಿಬೆಟ್ಟದ ಗ್ರಾಮ ಪಂಚಾಯ್ತಿ ಮುಂದೆ ಜಮಾಯಿಸಿದ ನಿವಾಸಿಗಳು, ರಾಜ್ಯ ಸರ್ಕಾರ ಹಾಗೂ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ನಿವಾಸಿಗಳು, ದೇವಸ್ಥಾನದ ಆವರಣದಲ್ಲಿ ಕಟ್ಟಡ ನಿರ್ಮಾಣದಿಂದ ಮೂಲ ದೇವಸ್ಥಾನದ ಗೋಪುರಕ್ಕೆ ಧಕ್ಕೆ ಬರಲಿದೆ. ಮೇಲ್ಭಾಗದಲ್ಲಿ ಜಾಗವೇ ಇಲ್ಲ, ಈ ನಡುವೆ ಈ ರೀತಿ ಅಗೆದು ದೇವಸ್ಥಾನಕ್ಕೆ ಧಕ್ಕೆ ತರುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.





