ಬೆಂಗಳೂರು : ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ತವ್ಯದ ಸಮಯದಲ್ಲೇ ಬೆಂಗಳೂರಿನಲ್ಲಿರುವ ಡಿಜಿಪಿ ಕಚೇರಿಯಲ್ಲೇ ಮಹಿಳೆಯರ ಜೊತೆ ಡಾ.ರಾಮಚಂದ್ರರಾವ್ ರಾಸಲೀಲೆ ನಡೆಸಿದ್ದು, ಸೀಕ್ರೆಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ.
ಕಚೇರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಿಳೆಯರನ್ನು ತಬ್ಬಿಕೊಂಡು ಮುತ್ತು ಕೊಟ್ಟಿದ್ದಾರೆ. ಒಂದು ವರ್ಷದ ಹಿಂದಿನ ವಿಡಿಯೋ ಎಂದು ಹೇಳಲಾಗಿದ್ದು, ಇದೀಗ ವೈರಲ್ ಆಗಿದೆ. ಇದು ಪೊಲೀಸ್ ಇಲಾಖೆಯ ಶಿಸ್ತು, ಘನತೆ, ಗೌರವಕ್ಕೆ ಧಕ್ಕೆ ತರುವ ವಿಷಯ. ಕಚೇರಿಯ ವೇಳೆಯಲ್ಲಿ ಪೊಲೀಸ್ ವಸ್ತ್ರದಲ್ಲೇ ರಾಮಚಂದ್ರ ರಾವ್ ರಾಸಲೀಲೆ ನಡೆಸಿರುವುದು ತೀವ್ರ ಟೀಕೆಗೆ ಗುರಿಯಾಗಿದೆ. ಸದ್ಯ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ಡಿಜಿಪಿ ದೌಡಯಿಸಿದ್ದಾರೆ. ಆದರೆ, ಪರಮೇಶ್ವರ್ ಅವರು ಭೇಟಿಗೆ ನಿರಾಕರಿಸಿ ಮನೆ ಗೇಟಿನಿಂದಲೇ ವಾಪಸ್ ಕಳುಹಿಸಿದ್ದಾರೆ. ಮತ್ತೊಂದೆಡೆ ಈ ರಾಸಲೀಲೆ ವಿಡಿಯೋ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ. ಹೀಗಾಗಿ ಡಿಜಿಪಿ ರಾಮಚಂದ್ರ ರಾವ್ಗೆ ಸಂಕಷ್ಟ ಎದುರಾಗಿದೆ.
ಕ್ರಮಕ್ಕೆ ಸಿಎಂ ಸೂಚನೆ
ಈ ಬಗ್ಗೆ ನನಗೆ ಮುಂಜಾನೆ ವಿಚಾರ ಗೊತ್ತಾಗಿದೆ. ವಿಚಾರಣೆ ಮಾಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಮುಂದೆ ಯಾರೂ ದೊಡ್ಡವರಲ್ಲ.ಎಷ್ಟೇ ಎತ್ತರ ವ್ಯಕ್ತಿಯಾದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಒಟ್ಟಿನಲ್ಲಿ ಈ ರಾಸಲೀಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು ಪೊಲೀಸರ ನಡೆಯಿಂದಲೇ ಮೇಲಿಂದ ಮೇಲೆ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಘಟನೆಗಳು ನಡೆಯುತ್ತಿವೆ. ಇದೀಗ ರಾಮಚಂದ್ರ ರಾವ್ ರಾಸಲೀಲೆ ಸಂಬಂಧ ಸಿಎಂ ಹಾಗೂ ಗೃಹ ಸಚಿವರು ಕೆಂಡಾಮಂಡಲರಾಗಿದ್ದಾರೆ. ಹೀಗಾಗಿ ಡಿಜಿಪಿ ರಾಮಚಂದ್ರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವ ಎಲ್ಲಾ ಸಾಧ್ಯತೆಗಳಿವೆ.





