Mysore
19
clear sky

Social Media

ಸೋಮವಾರ, 19 ಜನವರಿ 2026
Light
Dark

ವಿಡಿಯೋ ವೈರಲ್‌ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅಜ್ಞಾತ ಸ್ಥಳಕ್ಕೆ

ಬೆಂಗಳೂರು : ಡಿಜಿಪಿ ರಾಮಚಂದ್ರರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್‌ ಅವರು ಹತ್ತು ದಿನ ರಜೆ ಹಾಕಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಕಾನೂನಾತ್ಮಕ‌ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ ರಾಮಚಂದ್ರ ರಾವ್ ಚರ್ಚಿಸಲಿದ್ದಾರೆ. ಮತ್ತೊಂದೆಡೆ ಡಿಜಿಪಿಗೆ ಶಾಕ್​​ ಕೊಡುವ ತಯಾರಿಯಲ್ಲಿ ರಾಜ್ಯ ಸರ್ಕಾರ ಇದ್ದು, ಯಾವುದೇ ಕ್ಷಣ ಅಧಿಕಾರಿ ಅಮಾನತು ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ವಿಚಾರಣೆ ಮಾಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದರು. ಅದಾದ ಕೆಲವೇ ಹೊತ್ತಲ್ಲಿ ಡಿಜಿಪಿ ರಜೆ ಹಾಕಿ ತೆರಳಿದ್ದಾರೆ. ಇನ್ನು ಘಟನೆ ಬಗ್ಗೆ ಮಾಜಿ ಪೊಲೀಸ್ ಅಧಿಕಾರಿಗಳಿಂದಲೂ ಆಕ್ರೋಶ ವ್ಯಕ್ತವಾಗಿದೆ.

Tags:
error: Content is protected !!