Mysore
19
clear sky

Social Media

ಸೋಮವಾರ, 19 ಜನವರಿ 2026
Light
Dark

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ಅವಿರೋಧ ಆಯ್ಕೆ

ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಮೂಲಕ ಪಕ್ಷದ ಇತಿಹಾಸದಲ್ಲೇ ಅತ್ಯಂತ ಚಿಕ್ಕವಯಸ್ಸಿನಲ್ಲಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಅಲಂಕರಿಸಿದ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಈ ಹಿಂದೆ ಹಾಲಿ ಕೇಂದ್ರದ ಸಚಿವ ನಿತಿನ್ ಗಡ್ಕರಿ ಅವರು ಅತಿ ಚಿಕ್ಕ ವಯಸ್ಸಿನಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಲಂಕರಿಸಿದ ದಾಖಲೆಯನ್ನು ನಿರ್ಮಿಸಿದ್ದರು.

ಪಕ್ಷದ ಚುನಾವಣಾ ವೇಳಾಪಟ್ಟಿ ಪ್ರಕಾರ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿತ್ತು. ಮಧ್ಯಾಹ್ನ 2 ಗಂಟೆಯಿಂದ ಸಂಜೆ 4:00 ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿತ್ತು ಬಳಿಕ ಸಂಜೆ ಐದರಿಂದ ಆರು ಗಂಟೆವರೆಗೆ ನಾಮಪತ್ರಗಳನ್ನು ಪರಿಶೀಲನೆ ನಡೆಸಲಾಯಿತು ಆದರೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಯಾರೊಬ್ಬರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ನಿತಿನ್ ನಬಿನ್ ಅವರು ಅವರು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು.

ಅಂತಿಮವಾಗಿ ನಿತಿನ್ ನಬಿನ್ ಅವರನ್ನು ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಚುನಾವಣಾ ಉಸ್ತುವಾರಿ ಕೆ.ಲಕ್ಷ್ಮಣ್ ಅವರು ಬಿಡುಗಡೆ ಮಾಡಿದ ಪತ್ರಿಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಹುದ್ದೆಗೆ ನಾಮಪತ್ರ ಸಲ್ಲಿಸಲು ಮೂರು ಸೆಟ್ ಮಾಡಿಕೊಳ್ಳಲಾಗಿತ್ತು. ಮೊದಲ ಸೆಟ್ ನಲ್ಲಿ ಇಪ್ಪತ್ತಕ್ಕೂ ಹೆಚ್ಚು ಬಿಜೆಪಿ ರಾಜ್ಯ ಘಟಕಗಳ ಅಧ್ಯಕ್ಷರ ಸಹಿ ಇದ್ದರೆ,ಎರಡನೇ ಸೆಟ್’ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರ ಸಹಿ ಇತ್ತು. ಮೂರನೇ ಸೆಟ್’ನಲ್ಲಿ ಬಿಜೆಪಿ ರಾಷ್ಟ್ರೀಯ ಮಂಡಳಿಯ ಸದಸ್ಯರ ಸಹಿ ಇದ್ದವು. ಈ ಪ್ರಕ್ರಿಯೆಯು ನಿತಿನ್ ನಬಿನ್ ಅವರನ್ನು ಅಧ್ಯಕ್ಷ ಹುದ್ದೆಗೇರಿಸಲು, ಬಿಜೆಪಿ ರಚಿಸಿಕೊಂಡಿರುವ ಆಂತರಿಕ ಪದ್ದತಿಯಾಗಿದೆ.

ಬಿಜೆಪಿ ಆಡಳಿತವಿರುವ ಅರ್ಧಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಆಂತರಿಕ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದ್ದರಿಂದ 36 ರಾಜ್ಯಗಳ ಪೈಕಿ 30 ರಾಜ್ಯಗಳು ತಮ್ಮ ಆಯ್ಕೆಯನ್ನು ಅಂತಿಮಗೊಳಿಸಿವೆ. ಈ ರಾಜ್ಯಗಳ ರಾಜ್ಯಾಧ್ಯಕ್ಷರು ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಿತಿನ್ ನಬಿನ್ ಅವರ ಉಮೇದುವಾರಿಕೆ ಬೆಂಬಲಿಸಿ ಒಂದು ಸೆಟ್ ನಾಮಪತ್ರವನ್ನು ಸಲ್ಲಿಸಿದ್ದರು.. ಬಿಜೆಪಿಯ ರಾಷ್ಟ್ರೀಯ ಮಂಡಳಿಯ ಸದಸ್ಯರು ಮತ್ತೊಂದು ಸೆಟ್ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದರು.

ನಿತಿನ್ ನಬೀನ್ ಯಾರು ?
45 ವರ್ಷದ ನಿತಿನ್ ನಬಿನ್ ಪ್ರಸ್ತುತ ಬಿಹಾರ ಸರ್ಕಾರದಲ್ಲಿ ರಸ್ತೆ ನಿರ್ಮಾಣ ಸಚಿವರಾಗಿದ್ದಾರೆ ಮತ್ತು ಪಾಟ್ನಾದ ಬಂಕಿಪುರದಿಂದ ಐದು ಬಾರಿ ಶಾಸಕರಾಗಿದ್ದರು. ಅವರ ತಂದೆ ಮತ್ತು ಬಿಜೆಪಿಯ ಹಿರಿಯ ನಾಯಕ ನವೀನ್ ಕಿಶೋರ್ ಸಿನ್ಹಾ ಅವರ ನಿಧನ ಬಳಿಕ, ನಿತಿನ್ ನಬಿನ್ ತಮ್ಮ 26ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದರು.

ಬಿಹಾರದ ಕಾಯಸ್ಥ ಸಮುದಾಯದಕ್ಕೆ ಸೇರಿದ ನಿತಿನ್ ನಬಿನ್, ಬಿಹಾರ ಮತ್ತು ಪೂರ್ವ ಭಾರತದ ಮೊದಲ ಬಿಜೆಪಿ ಮುಖ್ಯಸ್ಥರಾಗಿರುವುದು ಮತ್ತೊಂದು ವಿಶೇಷ. ನಿತಿನ್ ನಬಿನ್ ಅವರು ತಮ್ಮ ವಿನಮ್ರ ಸ್ವಭಾವ ಮತ್ತು ಸ್ಥಾಪಿತ ಕಾರ್ಯ ಶೈಲಿಗೆ ಹೆಸರುವಾಸಿಯಾಗಿದ್ದಾರೆ. ಅವರ ಶಕ್ತಿ ಮತ್ತು ಸಮರ್ಪಣೆ ಮುಂದಿನ ದಿನಗಳಲ್ಲಿ ನಮ್ಮ ಪಕ್ಷವನ್ನು ಬಲಪಡಿಸುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಿತಿನ್ ನಬಿನ್ ಛತ್ತೀಸ್‌ಗಢ ಮತ್ತು ಸಿಕ್ಕಿಂನಲ್ಲಿ ಬಿಜೆಪಿ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Tags:
error: Content is protected !!