ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್ ಅಹಮ್ಮದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ತುಂಬಿಕೊಂಡು ಗೋಣಿಕೊಪ್ಪಲಿನಿಂದ ವಿರಾಜಪೇಟೆ ಕಡೆಗೆ ಬರುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಿಂದ ಗೋಮಾಂಸ ಸಾಗಾಟಕ್ಕೆ ಬಳಸಿದ್ದ ಕಾರನ್ನೂ ಕೂಡ ಜಪ್ತಿ ಮಾಡಿದ್ದಾರೆ.





