Mysore
22
light rain

Social Media

ಭಾನುವಾರ, 02 ಆಗಸ್ಟ್ 2026
Light
Dark

ಮೈಸೂರು-ಬೆಂಗಳೂರು ಮೇಲ್ಸೇತುವೆ ಕಾಮಗಾರಿ ಪ್ರಕ್ರಿಯೆ ಆರಂಭ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯ ಮಣಿಪಾಲ್‌ ಜಂಕ್ಷನ್‌ ಫ್ಲೈಓವರ್‌ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿದೆ.

ಇಂದಿನಿಂದ ಈ ಕಾಮಗಾರಿಯ ಪ್ರಕ್ರಿಯೆಗೆ ಹಸಿರು ನಿಶಾನೆ ದೊರೆಯಲಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆದೇಶ ಹೊರಡಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್‌ ಒಡೆಯರ್‌ ಅವರು ಇಂದಿನಿಂದ ಕಾಮಗಾರಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ಮಣಿಪಾಲ ಜಂಕ್ಷನ್‌ ಬಳಿ ಫ್ಲೈಓವರ್‌ ನಿರ್ಮಾಣ ಸಂಬಂಧ ಬೇಡಿಕೆಗಳು ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ನಿರಂತರ ಸಭೆ ನಡೆಸಿ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಲಾಯಿತು. ಅದಕ್ಕೀಗ ಪುರಸ್ಕಾರ ದೊರೆತಿದೆ ಎಂದು ಹೇಳಿದ್ದಾರೆ.

Tags:
error: Content is protected !!