ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಅಷ್ಟು ಸುಲಭವಾಗಿ ಸಿಗುವುದಿಲ್ಲ. ನಮ್ಮಣ್ಣನ ಹಣೆಬರಹದಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ. ಈ ಹಿಂದೆಯೂ ನಾನು ಇದನ್ನೇ ಹೇಳಿದ್ದೇನೆ. ಈಗಳು ಹೇಳುತ್ತಿದ್ದೇನೆ. ಅಧಿಕಾರ ಎನ್ನುವುದು ಯಾರಿಗೂ ಅಷ್ಟು ಸುಲಭವಾಗಿ ಸಿಗುವುದಿಲ್ಲ. ಎಲ್ಲವನ್ನೂ ತಾಳ್ಮೆಯಿಂದ ನೋಡಬೇಕು. ತಾಳ್ಮೆಯಿಂದ ಇರಬೇಕು ಎಂದು ಹೇಳಿದರು.
ನಮ್ಮ ಗುರಿ ಇರುವುದು 2028ರ ಚುನಾವಣೆ. ತಾಳ್ಮೆ ಇರಬೇಕು. ಡಿ.ಕೆ.ಶಿವಕುಮಾರ್ ಪಕ್ಷಕ್ಕೆ ನಿಷ್ಠರಾಗಿದ್ದಾರೆ. ಕೆಲವರು ವ್ಯಕ್ತಿಗೆ ಮಾತ್ರ ನಿಷ್ಠೆಯಿಂದ ಇರುತ್ತಾರೆ. ಜಾತಿ ಮೇಲೆ ರಾಜಕಾರಣ ಅಭಿವೃದ್ಧಿಗೆ ಕುಂಠಿತವಾಗುತ್ತದೆ. ಕೆಲವರು ಅಧಿಕಾರಕ್ಕೋಸ್ಕರ ಇರುತ್ತಾರೆ. ಡಿಕೆಶಿ ಎಲ್ಲಾ ತರಹದ ನೋವು, ಕಷ್ಟ ನೋಡಿದ್ದಾರೆ ಎಂದು ಹೇಳಿದರು.





