Mysore
32
moderate rain

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್‌ ಅಪಘಾತ: ಓರ್ವ ಸಾವು

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್‌ ಕೋಚ್‌ ಬಸ್‌ ಕಂಟೇನರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 11 ಮಂದಿಗೆ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ.

ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಿಹಾರ ಮೂಲದ 20 ವರ್ಷದ ಸುಹಾಸ್‌ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:
error: Content is protected !!