Mysore
25
light rain

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ

ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಶಹಬಾಜ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ. ನಗದರ ಬೀಡಿ ಕಾಲೋನಿಯಲ್ಲಿ ಶಹಬಾಜ್‌ನನ್ನು ಇಂದು ಬೆಳಗಿನ ಜಾವ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಇದು ಆಟೋ ಫೇರ್‌ ಸಂಗ್ರಹಿಸುವ ಹಾಗೂ ಇನ್ನಿತರ ವಿಚಾರದಿಂದ ನಡೆದಿರುವ ಕೊಲೆ ಎಂದು ತಿಳಿದುಬಂದಿದೆ. ತನಿಖೆಯ ನಂತರ ನಿಖರ ಕಾರಣ ತಿಳಿದು ಬರಲಿದೆ.

ಆರೋಪಿಗಳ ಪತ್ತೆಗೆ ತಂಡವನ್ನು ರಚನೆ ಮಾಡಲಾಗಿದ್ದು, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!