Mysore
18
clear sky

Social Media

ಮಂಗಳವಾರ, 20 ಜನವರಿ 2026
Light
Dark

ಜಂಟಿ ಅಧಿವೇಶನದಲ್ಲಿ ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ: ಸಿಎಂ ಸಿದ್ದರಾಮಯ್ಯ

cm siddaramaiah

ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು.

ಇನ್ನು ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುತ್ತೇನೆ ಎಂದರು.

ಇನ್ನು ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ ಅಮಾನತ್ತುಗೊಳಿಸಲಾಗಿದೆ ಎಂದರು

Tags:
error: Content is protected !!