Mysore
21
few clouds

Social Media

ಮಂಗಳವಾರ, 20 ಜನವರಿ 2026
Light
Dark

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ ತರಾಟೆ ತೆಗೆದುಕೊಂಡಿದೆ.

ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ರಾಜೀವ್‌ ಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.

ಅರ್ಜಿ ವಿಚಾರಣೆ ವೇಳೆ ರಾಜೀವ್‌ ಗೌರ ಪರ ವಾದ ಮಂಡಿಸಿದ ವಕೀಲ ವಿವೇಕ್‌ ರೆಡ್ಡಿ, ಫೋನ್‌ ಮೂಲಕ ಆಡಿದ ಮಾತಿಗೆ ಮಾಧ್ಯಮದಲ್ಲೇ ಕ್ಷಮೇ ಕೇಳಿದ್ದಾರೆ. ಸಾರ್ವಜನಿಕವಾಗಿ ಕ್ಷಮೆ ಕೇಳಲು ರಾಜೀವ್‌ ಗೌಡ ಸಿದ್ಧರಿದ್ದಾರೆ ಎಂದು ಕೋರ್ಟ್‌ಗೆ ಮನವಿ ಸಲ್ಲಿಸಿದರು.

ಈ ವೇಳೆ ರಾಜೀವ್‌ಗೌಡಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ನಿಯಂತ್ರಣವಿಲ್ಲದ ನಾಲಿಗೆ ಎಲ್ಲವನ್ನೂ ಹಾಳು ಮಾಡಬಲ್ಲದು. ನೀವು ಕ್ಷಮೆ ಕೇಳಿದರೂ ಒಡೆದಿರುವುದು ಒಂದಾಗುವುದಿಲ್ಲ ಎಂದು ಕ್ಲಾಸ್‌ ತೆಗೆದುಕೊಂಡು, ರಾಜೀವ್‌ ಗೌಡ ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿತು.

Tags:
error: Content is protected !!