Mysore
24
broken clouds

Social Media

ಸೋಮವಾರ, 16 ಮಾರ್ಚ್ 2026
Light
Dark

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.

ಕೇರಳದ ಕಣ್ಣೂರು ಜಿಲ್ಲೆಯ ತಲಚೇರಿ ತಾಲ್ಲೂಕಿನ ಶಿವಪುರಂ ಗ್ರಾಮದ ಹ್ಯಾರೀಸ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.

ಜನವರಿ.18ರಂದು ಆರೋಪಿ ಹ್ಯಾರೀಸ್‌ ಅಂಗಡಿಯ ಟೇಬಲ್‌ ಡ್ರಾದಲ್ಲಿದ್ದ 1,15,680 ರೂ ನಗದನ್ನು ಕದ್ದು ಪರಾರಿಯಾಗಿದ್ದ.

ಈ ಸಂಬಂಧ ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿ ಹ್ಯಾರೀಸ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

 

Tags:
error: Content is protected !!