Mysore
15
few clouds

Social Media

ಗುರುವಾರ, 22 ಜನವರಿ 2026
Light
Dark

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಮಂಡ್ಯ ಜಿಲ್ಲಾ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ನೂತನವಾಗಿ ನವೀಕರಣ ಕಾರ್ಯಾಲಯ ಉದ್ಘಾಟನೆ ಹಾಗೂ ಕೂಸಿನ ಮನೆ ಉದ್ಘಾಟನೆ ಮತ್ತು ವಿಶೇಷ ಅಂಚೆ ಲಕೋಟಿ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊಕ್ಕರೆ ಬೆಳ್ಳೂರು ಇತಿಹಾಸ ಪ್ರಸಿದ್ಧವಾದ ಪಕ್ಷಿಧಾಮ ತಾಣವಾಗಿದೆ. ದೇಶ ವಿದೇಶಗಳಿಂದ ಇಲ್ಲಿಗೆ ಪಕ್ಷಿಗಳು ಇಲ್ಲಿಗೆ ವಸಗೆ ಬಂದು ವಾಸ ಮಾಡುತ್ತಿವೆ. ಇದನ್ನು ನೋಡಲು ಪ್ರವಾಸಿಗರು ದೇಶ ವಿದೇಶಗಳಿಂದಲೂ ಬರುತ್ತಾರೆ.

ಆದರೆ, ಇತ್ತೀಚಿನ ದಿನಗಳಲ್ಲಿ ಆಹಾರ ಮತ್ತು ನೀರಿನ ಕೊರತೆ ಮತ್ತಿತರೆ ಸಮಸ್ಯೆಗಳಿಂದ ಪಕ್ಷಿಗಳ ಸಂಖ್ಯೆ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಅವುಗಳಿಗೆ ಬೇಕಾದ ಎಲ್ಲಾ ರೀತಿಯ ಸೌಕರ್ಯಗಳನ್ನು ಕಲ್ಪಿಸುವುದರ ಮೂಲಕ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮವನ್ನಾಗಿ ಮಾಡಲಾಗುವುದು. ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಕೊಕ್ಕರೆ ಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆಂಪರಾಜು ಅವರು ತಮ್ಮೆಲ್ಲಾ ಸದಸ್ಯರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಚರಂಡಿ ಅಭಿವೃದ್ಧಿ ಹಾಗೂ ಪಂಚಾಯಿತಿಯ ನೂತನ ಕಾರ್ಯಾಲಯವನ್ನು ನವೀಕರಣಗೊಳಿಸಿ ಉದ್ಘಾಟನೆ ಮಾಡಿಸಿದ್ದಾರೆ. ಗ್ರಾಮಗಳ ಅಭಿವೃದ್ಧಿಯಾಗಬೇಕಾದರೆ ಅಲ್ಲಿಯ ಸ್ಥಳೀಯ ಜನಪ್ರತಿನಿಧಿಗಳು ಸಹಕರಿಸಬೇಕು ಎಂದರು.

ಇದೇ ವೇಳೆ ವಿಶೇಷ ಅಂಚೆ ಲಕೋಟೆಯನ್ನು ಶಾಸಕ ಕೆ.ಎಂ.ಉದಯ್ ಅವರು ಲೋಕಾರ್ಪಣೆಗೊಳಿಸಿದರು. ಭಾರತೀಯ ಅಂಚೆ ಇಲಾಖೆಯ ಅಧಿಕ್ಷಕರಾದ ಎಂ.ಡಿ.ಆಕಾಶ್ ಮಾತನಾಡಿ, ಅಂಚೆ ಇಲಾಖೆ ಲಕೋಟೆ ಬಿಡುಗಡೆಯಿಂದ ಎಲ್ಲ ರಾಜ್ಯಗಳಲ್ಲೂ ಕೊಕ್ಕರೆ ಬೆಳ್ಳೂರು ಹೆಚ್ಚು ಪ್ರಚಲಿತಕ್ಕೆ ಬರಲಿದೆ. ಇದರಿಂದ ಈ ಪಕ್ಷಿಧಾಮದ ವಿಚಾರವೂ ಎಲ್ಲರಿಗೂ ತಿಳಿಯುತ್ತದೆ ಎಂದರು.

ರಾಷ್ಟ್ರ, ರಾಜ್ಯಮಟ್ಟದಲ್ಲಿ ಖೋ ಖೋ ಆಟವನ್ನು ಆಡಿ ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಸಕ ಕೆ.ಎಂ.ಉದಯ್, ಪಂಚಾಯಿತಿ ಅಧ್ಯಕ್ಷ ಕೆಂಪರಾಜು ಅವರು ಸನ್ಮಾನಿಸಿದರು.

ಗ್ರಾಪಂ ಉಪಾಧ್ಯಕ್ಷೆ ಜ್ಯೋತಿ, ಸದಸ್ಯರಾದ ನಟರಾಜು, ಮಾದೇಶ್, ಸುಂದರಮ್ಮ, ದಿವ್ಯ ರಾಮಚಂದ್ರಶೆಟ್ಟಿ, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಅಂಚೆ ಇಲಾಖೆಯ ಅಧಿಕ್ಷಕ ಆಕಾಶ್, ಎಂ.ಡಿ.ರಾಜು ಕಾಳೇಶ್ವರ, ನಾಗರಾಜು, ಪಿಡಿಒ ಪ್ರಭಾಕರ್, ಅಂಚೆ ಇಲಾಖೆಯ ಚೈತ್ರ ಶಶಿಧರ್‌ಗೌಡ, ಪಂಚಾಯಿತಿ ಸದಸ್ಯರು, ಸಿಬ್ಬಂದಿ ವರ್ಗ, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

 

 

Tags:
error: Content is protected !!