Mysore
28
scattered clouds

Social Media

ಶನಿವಾರ, 24 ಜನವರಿ 2026
Light
Dark

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ ರೂಪಾಯಿಗೆ ಕೇವಲ ೧೩ ಪೈಸೆಯಷ್ಟು ಮಾತ್ರ ನೆರವು ನೀಡುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಇದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ.

ಕಳೆದ ಎರಡೂವರೆ ವರ್ಷಗಳಿಂದಲೂ, ಸಭೆಗಳಲ್ಲಿ, ಸದನದಲ್ಲಿ ಸಿದ್ದರಾಮಯ್ಯನವರು ಈ ಮಾತುಗಳನ್ನು ಹೇಳುತ್ತಿದ್ದಾರೆ. ಆದರೆ ನಮ್ಮ ಪಾಲಿನ ತೆರಿಗೆ ಪಡೆಯಲು ಇವರಾಗಲಿ, ಇವರ ಪಕ್ಷದ ಸಂಸದರಾಗಲಿ, ಇವರ ಸರ್ಕಾರದ ಅಧಿಕಾರಿಗಳಾಗಲಿ ಕೇಂದ್ರ ಸರ್ಕಾರ ದ ಮೇಲೆ ಹೆಚ್ಚಿನ ಒತ್ತಡ ಹೇರಿದ ನಿದರ್ಶನವಿಲ್ಲ. ಸರ್ಕಾರದ ದೆಹಲಿ ಪ್ರತಿನಿಧಿ ಏನು ಮಾಡುತ್ತಿದ್ದಾರೆ? ದೆಹಲಿ ಭವನದಲ್ಲಿರುವ ಕರ್ನಾಟಕದ ಅಧಿಕಾರಿಗಳು ಈ ಬಗ್ಗೆ ಏಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ? ರಾಜ್ಯ ಸರ್ಕಾರ ಹಾಗೂ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಸಾಕಷ್ಟು ಅನುದಾನ ತಂದು ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕಾಗಿದೆ.

-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು

 

 

Tags:
error: Content is protected !!