ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ ನೀಡಿದ್ದಾರೆ.
ಗೋಣಿಕೊಪ್ಪ-ತಿತಿಮತಿ ವ್ಯಾಪ್ತಿಯ ಮತ್ತಿಗೋಡು ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಹುಲಿಯೊಂದು ಕಾಣಿಸಿಕೊಂಡಿದೆ. ಹೆದ್ದಾರಿ ಬದಿಯಲ್ಲೇ ರಾಜಾರೋಷವಾಗಿ ಸಂಚರಿಸಿದ ಹುಲಿ ಆತಂಕ ಸೃಷ್ಟಿಸಿದೆ. ರಸ್ತೆ ಬದಿಯಲ್ಲಿ ವ್ಯಾಘ್ರ ಸಂಚರಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ ಹುಲಿ ಸೆರೆಗೆ ಶಾಸಕ ಎ.ಎಸ್. ಪೊನ್ನಣ್ಣ ಸೂಚನೆ ನೀಡಿದ್ದಾರೆ.
ತಕ್ಷಣವೇ ಕೂಂಬಿಂಗ್ ಆರಂಭಿಸಿ ಹುಲಿ ಪತ್ತೆಹಚ್ಚಿ ಸೆರೆಹಿಡಿಯಲು ಸೂಚಿಸಿದ್ದು, ಅರಣ್ಯ ಇಲಾಖೆ ಹುಲಿ ಪತ್ತೆಗೆ ಕಾರ್ಯಾಚರಣೆಗೆ ಕ್ರಮ ಕೈಗೊಂಡಿದೆ.




