ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ನಾಲ್ಕು ವಿಶೇಷ ತಂಡಗಳನ್ನ ರಚಿಸಿ ಬೆಂಗಳೂರು, ಕೋಲಾರ, ತಮಿಳುನಾಡು ಸೇರಿದಂತೆ ಹಲವೆಡೆ ಶೋಧಕಾರ್ಯ ನಡೆಸಲಾಗುತ್ತಿದೆ. ಆದರೆ ತಲೆಮರೆಸಿಕೊಂಡಿರುವ ರಾಜೀವ್ ಗೌಡ ಎಲ್ಲಿದ್ದಾರೆ ಎಂಬುದು ಪೊಲೀಸರಿಗೂ ತಿಳಿಯುತ್ತಿಲ್ಲ. ಈ ನಡುವೆ ರಾಜೀವ್ ಗೌಡ ಮನೆಗೆ ಎರಡನೇ ನೋಟಿಸ್ ಅಂಟಿಸಲಾಗಿದೆ.
ರಾಜೀವ್ ಗೌಡಗೆ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಹಾಗೂ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಕೂಡ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ರಾಜೀವ್ ಗೌಡಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ.





