ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದ್ದಾರೆ.
ಈ ಕುರಿತು ಪ್ರತಾಪ್ ಸಿಂಹ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.
ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಹಾಗೂ ವಾಹನ ಸಂಚಾರವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೆಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಕೋರಿ ಮನವಿ ಮಾಡಲಾಯಿತು ಎಂದು ಹೇಳಿದ್ದಾರೆ.
ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಸಂಸದರಿಗೆ ಧನ್ಯವಾದಗಳು ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನು ಮುಂದಿನ 2028ರ ವಿಧಾನಸಭೇ ಚುನಾವಣೆಗೆ ಪ್ರತಾಪ್ ಸಿಂಹ ಅವರು ಮೈಸೂರು ನಗರದ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ. ಈ ಹಿನ್ನೆಲೆಯಲ್ಲಿ ಅವರು ಭಾರೀ ಸುದ್ದಿಯಲ್ಲಿದ್ದು, ಚಾಮರಾಜ ಕ್ಷೇತ್ರದ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.





