ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಜ.27 ರಿಂದ ಫೆ.2 ರವರೆಗೆ ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ-2 ನಡೆಯಲಿದೆ. ಜ.27 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45 ಗಂಟೆಯವರೆಗೆ ಪ್ರಥಮ ಭಾಷೆಯಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(ಎನ್‍ಸಿಇಆರ್‌ಟಿ), ಸಂಸ್ಕೃತ ಪರೀಕ್ಷೆ ನಡೆಯಲಿದೆ.
ಜ.28 ರಂದು ಗಣಿತ, 29 ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, 30 ರಂದು ತೃತೀಯ ಭಾಷೆ ಹಿಂದಿ (ಎನ್‍ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ ಭಾಷಾ ಪರೀಕ್ಷೆ ನಡೆಸಲಾಗುತ್ತದೆ.
ಜ.31 ರಂದು ವಿಜ್ಞಾನ, ಫೆ.2ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿದ್ದು, ತೃತೀಯ ಭಾಷೆ ಮರಾಠಿ ವಿಷಯಗಳ ಪೂರ್ವಸಿದ್ಧತಾ ಪರೀಕ್ಷೆಗಳು ಶಾಲಾ ಹಂತದಲ್ಲಿ ಸಂಬಂಧಿಸಿದ ವಿಷಯ ಶಿಕ್ಷಕರಿಂದ ಪ್ರಶ್ನೆ ಪತ್ರಿಕೆ ತಯಾರಿಸಿಕೊಂಡು ಪರೀಕ್ಷೆ ನಡೆಸಲು ಶಾಲಾ ಮುಖ್ಯ ಶಿಕ್ಷಕರು ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರೌಢಶಾಲಾ ನಿರ್ದೇಶಕರು ಸೂಚಿಸಿದ್ದಾರೆ.





