Mysore
29
clear sky

Social Media

ಶನಿವಾರ, 31 ಜನವರಿ 2026
Light
Dark

ಗಣರಾಜ್ಯೋತ್ಸವ ಸಂಭ್ರಮ : ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಧ್ವಜಾರೋಹಣ, ಪರೇಡ್‌ ಆರಂಭ

ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು.

ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ೩೦ಕ್ಕೂ ಹೆಚ್ಚು ತುಕಡಿಗಳ ಗೌರವ ವಂದನೆ ಸ್ವೀಕಾರ ಮಾಡಿದರು.

ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಡಿನ ಸಮಸ್ತ ಜನತೆಗೆ 76ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.

ಪರೇಡ್‌ ಆರಂಭ
ಬೆಂಗಳೂರಿನ ಮಾಣಿಕ್‌ ಷಾ ಮೈದಾನದಲ್ಲಿ ಗಣರಾಜ್ಯೋತ್ಸವದ ಪರೇಡ್‌ ಆರಂಭಗೊಂಡಿದೆ.

ರಸ್ತೆ ಸಂಚಾರ ಬದಲು
ಕಬ್ಬನ್‌ ರಸ್ತೆಯ ಫೀಲ್ಡ್‌ ಮಾರ್ಷಲ್‌ ಮಾಣೆಕ್‌ ಷಾ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುತ್ತಲಿನ ರಸ್ತೆಗಳ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಬೆಳಗ್ಗೆ 8.30ರಿಂದ 10.30ರವರೆಗೆ ಕಬ್ಬನ್‌ ರಸ್ತೆಯ ಬಿಆರ್‌ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್‌ ಸೆಂಟರ್‌ ಕಡೆಗೆ ಸಂಚರಿಸುವ ವಾಹನಗಳು ಸಫೀನಾ ಪ್ಲಾಜಾ ಬಳಿ ಎಡಕ್ಕೆ ತಿರುಗಿ ಮೈನ್‌ಗಾರ್ಡ್‌, ಆಲೀಸ್‌ ಸರ್ಕಲ್, ಡಿಸ್ಪೆನ್ಸರಿ ರಸ್ತೆ, ಕಾಮರಾಜ ರಸ್ತೆ ಮೂಲಕ ಬಂದು ಡಿಕನ್ಸನ್‌ ರಸ್ತೆ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಬೇಕು. ಬಳಿಕ ಕಾಮರಾಜ ರಸ್ತೆ, ಕಬ್ಬನ್‌ ರಸ್ತೆಯಲ್ಲಿ ಸಾಗಿ ಕಾಮರಾಜ ರಸ್ತೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಮಣಿಪಾಲ್‌ ಸೆಂಟರ್‌ ಕಡೆಗೆ ಹೋಗಬೇಕು.

Tags:
error: Content is protected !!