ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತಗೆ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ ಭೀತಿಯಿಂದ ಊರೂರು ಅಲೆಯುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಯಾವುದೇ ಕ್ಷಣದಲ್ಲಿ ಪೊಲೀಸರು ಬಂಧಿಸುವ ಭೀತಿಯಲ್ಲಿ ರಾಜೀವ್ ಗೌಡ ರಾಜ್ಯ ಬಿಟ್ಟು ಪರಾರಿಯಾಗಿದ್ದಾರೆ.
12 ದಿನಗಳಿಂದ ಶಿಡ್ಲಘಟ್ಟದ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಓಡಾಡುತ್ತಿದ್ದಾನೆ. ಸಿಎಂ ಸಿದ್ದರಾಮಯ್ಯ ಈ ಪ್ರಕರಣದಲ್ಲಿ ಪೊಲೀಸರ ವಿರುದ್ಧ ಗರಂ ಆಗಿದ್ದು, ಹಿರಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ರಾಜೀವ್ ಗೌಡನನ್ನು ಕಾಂಗ್ರೆಸ್‌ನಿಂದ ಅಮಾನತು ಮಾಡಿ ಕೆಪಿಸಿಸಿ ಶಿಸ್ತು ಸಮಿತಿ ಶಾಕ್ ಕೊಟ್ಟಿದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಕಾರ್ಯ ವೈಖರಿಗೆ ಸಿಎಂ ಸಿದ್ದರಾಮಯ್ಯ ಸಿಟ್ಟಾಗಿದ್ದಾರೆ. ಕೂಡಲೇ ರಾಜೀವ್ ಗೌಡನನ್ನು ಬಂಧಿಸಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.





