ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟ ಪೊಲೀಸರು ಕೇರಳದಲ್ಲಿ ರಾಜೀವ್ ಗೌಡನನ್ನು ಬಂಧಿಸಿ ಚಿಕ್ಕಬಳ್ಳಾಪುರಕ್ಕೆ ಕರೆತರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಎಲ್ಲಿ ಹುಡುಕಿದರೂ ಪೊಲೀಸರಿಗೆ ಸಿಗುತ್ತಿರಲಿಲ್ಲ. ಹೀಗಾಗಿ ಮಧ್ಯಾಹ್ನವಷ್ಟೇ ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಖಡಕ್ ಸೂಚನೆ ನೀಡಿ ರಾಜೀವ್ ಗೌಡನನ್ನು ಬಂಧನಕ್ಕೆ ಸೂಚಿಸಿದ್ದರು. ಈ ಬೆನ್ನಲ್ಲೇ ಈಗ ರಾಜೀವ್ ಗೌಡನ ಬಂಧನವಾಗಿದೆ.





