ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು ಅಡ್ಡಿಪಡಿಸಿದ್ದ ವಿಚಾರವಾಗಿ ಲೋಕಭವನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ರವಾನಿಸಿದೆ.
ರಾಜ್ಯದ ಬೆಳವಣಿಗೆಗಳ ಬಗ್ಗೆ ವಾರ, ತಿಂಗಳಿಗೊಮ್ಮೆ ರಾಷ್ಟ್ರಪತಿಗೆ ವರದಿ ಸಲ್ಲಿಸುವುದು ರಾಜ್ಯಪಾಲರ ವಾಡಿಕೆ. ಈ ಬಾರಿ ವಾರದ ವರದಿ ಅಲ್ಲದೇ ಪ್ರತ್ಯೇಕ ವರದಿಯನ್ನು ಸಿದ್ಧಪಡಿಸಿ ವಿಧಾನಸಭೆಯಲ್ಲಿ ಭಾಷಣ ಮಾಡದೇ ಸದನದಿಂದ ನಿರ್ಗಮಿಸಿದ್ದು, ಆ ಬಳಿಕ ಕಾಂಗ್ರೆಸ್ ಸದಸ್ಯರು ನಡೆದುಕೊಂಡ ರೀತಿ ನಂತರದ ಬೆಳವಣಿಗೆಗಳ ಬಗ್ಗೆ ಪ್ರತ್ಯೇಕವಾಗಿ ವರದಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.





