Mysore
36
few clouds

Social Media

ಶನಿವಾರ, 18 ಏಪ್ರಿಲ 2026
Light
Dark

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ನರೇಗಾ ಉಳಿಸಿ ಆಂದೋಲನ ಮತ್ತು ಲೋಕಭವನ ಚಲೋ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದ ಲಕ್ಷಾಂತರ ಬಡ ಕುಟುಂಬಗಳಿಗೆ ವರ್ಷವಿಡೀ ಉದ್ಯೋಗ ಒದಗಿಸುತ್ತಾ, ಅವರ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದು ಮಾಡಿ, ಕೇಂದ್ರ ಸರ್ಕಾರ ಬಯಸಿದಾಗಷ್ಟೇ ಉದ್ಯೋಗ ನೀಡುವ ವಿಬಿ ಗ್ರಾಮ್‌ ಜೀ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

ಇದು ಮಹಾತ್ಮ ಗಾಂಧಿಯವರ ಚಿಂತನೆ ಹಾಗೂ ಅವರ ಗ್ರಾಮ ಸ್ವರಾಜ್ಯದ ಆಶಯದ ಮೇಲಿ ಗದಾಪ್ರಹಾರ. ಕೇಂದ್ರ ಸರ್ಕಾರ ಈ ಜನವಿರೋಧಿ ಕಾಯ್ದೆಯನ್ನು ಹಿಂಪಡೆದು, ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.

 

Tags:
error: Content is protected !!