ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ ಹಾಕಿವೆ.
ಅಂತರಾಷ್ಟ್ರೀಯ ಗಮನ ಸೆಳೆಯುತ್ತಿರುವ ಈ ಒಪ್ಪಂದ ಎರಡು ಶತಕೋಟಿ ಜನರ ಮಾರುಕಟ್ಟೆಯನ್ನು ಸೃಷ್ಟಿಸುತ್ತದೆ. ಜಾಗತಿಕ ಜಿಡಿಪಿ ಒಟ್ಟು ದೇಶೀಯ ಉತ್ಪನ್ನದ ಸುಮಾರು ಕಾಲು ಭಾಗದಷ್ಟು ಪಾಲನ್ನು ಹೊಂದಿರುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ.
ಈ ವ್ಯಾಪಾರ ಒಪ್ಪಂದವು ಭಾರತಕ್ಕೆ ಪ್ರವೇಶಿಸುವ ಯುರೋಪಿಯನ್ ಒಕ್ಕೂಟದ ರಫ್ತಿನ ಸುಮಾರು ಶೇಕಡಾ.97ರಷ್ಟು ಮೇಲಿನ ಸುಂಕವನ್ನು ಕಡಿತಗೊಳಿಸುತ್ತದೆ. ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೃಢಪಡಿಸಿದ್ದಾರೆ. ಈ ಬೆಳವಣಿಗೆಯು ಅಮೇರಿಕಾವನ್ನು ಕೆರಳಿಸಿದಂತೆ ಕಂಡುಬಂದಿದೆ.
ಇದು ಯುರೋಪಿಯನ್ ಒಕ್ಕೂಟ ಹಾಗೂ ಭಾರತ ಎರಡೂ ಇದುವರೆಗೆ ಮಾಡಿಕೊಂಡಿರುವ ಅತಿದೊಡ್ಡ ವ್ಯಾಪಾರ ಒಪ್ಪಂದವಾಗಿದೆ.





