ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು ಮೀಟರ್ ಹಾಕದೆ ಗ್ರಾಹಕರ ಹತ್ತಿರ, ತಮಗಿಷ್ಟ ಬಂದ ಹಾಗೆ ಬಾಡಿಗೆ ಹಣ ವಸೂಲಿ ಮಾಡುತ್ತಿದ್ದಾರೆ. ನಂಜನಗೂಡಿನಲ್ಲಿ ಆಪ್ ಆಧಾರಿತ ಓಲಾ, ಊಬರ್ ಆಟೋ ಸೇವೆ ವ್ಯವಸ್ಥೆ ಇಲ್ಲದಿರುವುದರಿಂದ ಪ್ರಯಾಣಿಕರು ಅನಿವಾರ್ಯವಾಗಿ ದುಬಾರಿ ಹಣ ನೀಡಿ ಸಂಚರಿಸುತ್ತಿದ್ದಾರೆ. ಸಂಬಂಧಪಟ್ಟವರು ಕೂಡಲೇ ಆಟೋಗಳಿಗೆ ಮೀಟರ್ ದರ ನಿಗದಿಪಡಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಬಿ.ಎಸ್.ಸಾಯಿ ಸಂದೇಶ್, ಮೈಸೂರು





