Mysore
16
few clouds

Social Media

ಶುಕ್ರವಾರ, 30 ಜನವರಿ 2026
Light
Dark

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ. ಈ ಬಗ್ಗೆ ಯಾವುದೇ ಗೊಂದಲಗಳೂ ಬೇಡ. ಅವರು ಸಚಿವರಾಗಿಯೇ ಮುಂದುವರೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.

ಈ ಮೂಲಕ ಸಚಿವರ ರಾಜೀನಾಮೆ ಬಗ್ಗೆ ಎದ್ದಿದ್ದ ಎಲ್ಲಾ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.

Tags:
error: Content is protected !!