Mysore
30
clear sky

Social Media

ಶನಿವಾರ, 31 ಜನವರಿ 2026
Light
Dark

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, ಅವರನ್ನು ‘ಸ್ಕ್ಯಾಮ್ ಲಾರ್ಡ್’ ಎಂದು ಉಲ್ಲೇಖಿಸಿ ರಾಜ್ಯವನ್ನು ‘ಲೂಟಿ’ ಮಾಡುವಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ಪ್ರತಿನಿಧಿಸುವ ವಕೀಲರ ತಂಡವು ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಸ್ಕ್ಯಾಮ್ ಲಾರ್ಡ್ ಎಂಬ ಶೀರ್ಷಿಕೆಯ ಪೋಸ್ಟ್‌ನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಇತರ ಸಚಿವರ ಚಿತ್ರಗಳನ್ನು ‘ಇದು ಹಗರಣಗಳ ಕಥೆಯಲ್ಲ, ಅವುಗಳ ಹಿಂದಿನವರ ಕಥೆ’ ಎಂಬ ಶೀರ್ಷಿಕೆ ನೀಡಲಾಗಿದೆ. ‘ಇದು ಕರ್ನಾಟಕವನ್ನು ಹಗಲಿರುಳು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಹಗರಣ ಸಾಮ್ರಾಜ್ಯದ ನಿಜವಾದ ಕಥೆ’ ಎಂದು ಅದು ಹೇಳಿದೆ. ಬಿಜೆಪಿ, ‘ಲೂಟಿ ಮತ್ತು ‘ಸ್ಕ್ಯಾಮ್’ ಎಂಬ ಪದಗಳನ್ನು ಪದೇ ಪದೇ ಬಳಸುವ ಮೂಲಕ ಸಾರ್ವಜನಿಕರಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದು ಕೇವಲ ರಾಜಕೀಯ ಟೀಕೆಯಲ್ಲ, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವವರ ವ್ಯಕ್ತಿತ್ವವನ್ನು ಅವಹೇಳನ ಮಾಡುವ ವ್ಯವಸ್ಥಿತ ಪಿತೂರಿ ಎಂದು ಕಾಂಗ್ರೆಸ್ ಆರೋಪಿಸಿದೆ. ಸಮಾಜದ ಶಾಂತಿಯನ್ನು ಕದಡುವ ಇಂತಹ ಪೋಸ್ಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಪೋಸ್ಟ್ ಪ್ರಕಟವಾದ ಕೆಲವೇ ಗಂಟೆಗಳಲ್ಲಿ, ವಿರೋಧ ಪಕ್ಷ ಬಿಜೆಪಿ ವಿಧಾನಸಭೆಯಲ್ಲಿ ರಾಜ್ಯದಲ್ಲಿ ‘ಭ್ರಷ್ಟಾಚಾರ ಮತ್ತು ಕಾನೂನು ಸುವ್ಯವಸ್ಥೆ ವೈಫಲ್ಯ’ದ ವಿಷಯವನ್ನು ಪ್ರಸ್ತಾಪಿಸಿತು.

Tags:
error: Content is protected !!