Mysore
34
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು ಮಂಜೂರಾಗಿದೆ.

ಶಿಡ್ಲಘಟ್ಟ ಜೆಎಂಎಫ್‌ಸಿ ನ್ಯಾಯಾಲಯವು ಇಂದು (ಜನವರಿ 30) ಆರೋಪಿ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಿ ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡ ಅವರಿಗೆ ಜಾಮೀನು ನೀಡುವಾಗ ನ್ಯಾಯಾಲಯವು ಕೆಲವು ಷರತ್ತುಗಳನ್ನು ವಿಧಿಸಿದೆ. ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಬೆಂಬಲಿಗರಿಗೆ ತಾಕೀತು ಮಾಡಲಾಗಿದೆ.

ಘಟನೆ ಹಿನ್ನೆಲೆ
ಶಿಡ್ಲಘಟ್ಟದಲ್ಲಿ ಅನಧಿಕೃತ ಬ್ಯಾನರ್‌ಗಳು ಮತ್ತು ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಕ್ಕೆ ಅಸಮಾಧಾನಗೊಂಡ ರಾಜೀವ್ ಗೌಡ ಅವರು ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಫೋನ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು ಎಂಬ ಆರೋಪವಿತ್ತು. ಈ ಪ್ರಕರಣದಲ್ಲಿ ಶಿಡ್ಲಘಟ್ಟ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ರಾಜೀವ್ ಗೌಡ ಅವರು ಘಟನೆಯ ನಂತರ ತಲೆಮರೆಸಿಕೊಂಡಿದ್ದು, ಕೇರಳ ಗಡಿಯಲ್ಲಿ ಬಂಧನಕ್ಕೊಳಗಾಗಿದ್ದರು. ಮೊದಲು ಜಾಮೀನು ಅರ್ಜಿ ವಜಾಗೊಂಡು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದರು. ನಂತರದ ವಿಚಾರಣೆಯಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

 

 

Tags:
error: Content is protected !!