Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್: ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚುಂಚನಹಳ್ಳಿ ಗ್ರಾಮದ ರೈತ ನಂಜುಂಡಸ್ವಾಮಿ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ಚುಂಚನಹಳ್ಳಿ -ಕೋಣನೂರು ರಸ್ತೆ ಬಳಿ ಇರುವ ಜಮೀನಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಚಿರತೆ ಅಟ್ಯಾಕ್ ಮಾಡಿದೆ.

ಬೈಕ್‌ನಲ್ಲಿ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ ನಡೆಸಿದೆ. ಇದರ ಪರಿಣಾಮ ಮಗು ಸಮೇತ ರೈತ ದಂಪತಿ ಬೈಕ್‌ನಿಂದ ಬಿದ್ದು ಗಂಭೀರ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ತಗಡೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಸಿ ದಾಖಲಿಸಲಾಗಿದೆ.

ಚುಂಚನಹಳ್ಳಿ, ಕೋಣನೂರು, ಹನುಮನಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆಯ ಕಾಟ ಹೆಚ್ಚಾಗಿದ್ದು, ದಿನನಿತ್ಯ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದೆ. ಅಲ್ಲದೆ ಜಮೀನಿಗೆ ಹೋಗುವ ರೈತರ ಮೇಲು ದಾಳಿ ನಡೆಸಲು ಮುಂದಾಗುತ್ತಿದ್ದು, ಇಂದು ಜಮೀನಿಗೆ ತೆರಳುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಕೂಡಲೇ ಚಿರತೆಯನ್ನು ಬೋನು ಇಟ್ಟು ಸೆರೆ ಹಿಡಿಯಬೇಕು. ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಕಲ್ಯಾಣ ಸಂಘದ ರೈತರು ಒತ್ತಾಯಿಸಿದ್ದಾರೆ.

Tags:
error: Content is protected !!