Mysore
22
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಮಂಗನ ಕಾಯಿಲೆಗೆ ಮತ್ತೊಂದು ಬಲಿ

health tips

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ.

ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವರು ಮೃತಪಟ್ಟಿದ್ದಾರೆ. ಸಾವು-ನೋವು ಸಂಭವಿಸದಂತೆ ಆರೋಗ್ಯ ಇಲಾಖೆಯಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿತ್ತು. ಆದಾಗಿಯೂ ಒಂದು ಸಾವು ಸಂಭವಿಸಿರುವುದು ನೋವು ತಂದಿದೆ ಎಂದರು.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಮಂಗನ ಕಾಯಿಲೆ ಬಗ್ಗೆ ಮತ್ತಷ್ಟು ಎಚ್ಚರಿಕೆ ವಹಿಸಲಿದೆ. ಈಗಾಗಲೇ ಕೆಎಫ್‌ಡಿ ಕಾಯಿಲೆಗೆ ವ್ಯಾಕ್ಸಿನ್‌ ಸಿದ್ಧವಾಗುತ್ತಿದೆ. ಮುಂದಿನ ವರ್ಷದೊಳಗೆ ವ್ಯಾಕ್ಸಿನ್‌ ಲಭ್ಯವಾಗಲಿದೆ ಎಂದು ಹೇಳಿದರು.

Tags:
error: Content is protected !!