Mysore
17
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ರಾಮನಗರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಸಾವು

ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ.

ಗ್ಯಾಸ್‌ ಸೋರಿಕೆಯಿಂದ ಉಂಟಾದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ದುರಂತದಲ್ಲಿ ಸಾವನ್ನಪ್ಪಿರುವವರನ್ನು ಕುಟುಂಬದ ಮುಖ್ಯಸ್ಥ ಸಿದ್ದರಾಜು, ಅವರ ಪತ್ನಿ ಚಂದ್ರಮ್ಮ, ಪುತ್ರ ಪ್ರಶಾಂತ್‌ ಎಂದು ಗುರುತಿಸಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಕನಕಪುರ ಪಟ್ಟಣದ ಅಮರ ನಾರಾಯಣ ಬ್ಲಾಕ್‌ನಲ್ಲಿ ಈ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಕುಟುಂಬದ ಸದಸ್ಯರು ತೀವ್ರವಾಗಿ ಸುಟ್ಟ ಗಾಯಗಳಿಗೆ ಒಳಗಾಗಿದ್ದರು.

 

Tags:
error: Content is protected !!