Mysore
21
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

The Chief Minister himself is the brand ambassador of fake news: Opposition Leader R. Ashoka

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪಾಪರ್‌ ಆಗಿದೆ ಎಂದು ಬೋರ್ಡ್‌ ಹಾಕಿಕೊಳ್ಳಲಿ. ಸರ್ಕಾರದ ಖಜಾನೆಯಲ್ಲಿ ಹಣ ಇದೆಯೋ? ಇಲ್ಲವೋ? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಸರ್ಕಾರ ದಿವಾಳಿಯಾದಂತೆ ಕಾಣುತ್ತಿದೆ. ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ. ಆಡು ಮುಟ್ಟದ ಸೊಪ್ಪಿಲ್ಲ. ಲೂಟಿ ಹೊಡೆಯದ ಇಲಾಖೆ ಇಲ್ಲ ಎಂಬಂತಾಗಿದೆ. ಕಾಂಗ್ರೆಸ್‌ ಆಡಳಿತದಲ್ಲಿ ಎಲ್ಲವೂ ಲೂಟಿ ಹೊಡೆಯುವ ಪ್ರವೃತ್ತಿಯಾಗಿದೆ ಎಂದು ಕಿಡಿಕಾರಿದರು.

 

Tags:
error: Content is protected !!