Mysore
29
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿನ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ನಂದಿನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲೆಗಳಿಗೆ ಭೇಟಿ ನೀಡಿದ ಅವರು, ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ ಕಡಿಮೆಯಾಗಲು ಕಾರಣವೇನು ಎಂಬ ಬಗ್ಗೆ ಶಾಲೆಯ ಶಿಕ್ಷಕರ ಬಳಿ ಮಾಹಿತಿ ಪಡೆದರು.

ಮುಖ್ಯ ಪರೀಕ್ಷೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿಯಿದ್ದು, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಪೋಷಕರಿಗೂ ಸಹ ಸೂಕ್ತ ಮಾಹಿತಿ ನೀಡಿ ಮಕ್ಕಳಿಗೆ ಮನೆಯಲ್ಲಿಯೂ ಕಲಿಕಾ ವಾತಾವರಣ ನಿರ್ಮಾಣ ಮಾಡುವಂತೆ ಸೂಚನೆ ನೀಡಿದರು.

 

Tags:
error: Content is protected !!