Mysore
23
overcast clouds

Social Media

ಮಂಗಳವಾರ, 19 ಮೇ 2026
Light
Dark

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಆರ್.‌ಬಿ.ತಿಮ್ಮಾಪುರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಸದಸ್ಯರು ಆರ್.‌ಅಶೋಕ್‌ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.

ವಿಪಕ್ಷಗಳ ಪ್ರತಿಭಟನೆಗೆ ಆರ್.‌ಬಿ.ತಿಮ್ಮಾಪುರ ಪ್ರತಿಕ್ರಿಯೆ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ವಿಪಕ್ಷದವರು ರಾಜಕೀಯಕ್ಕಾಗಿ ಧರಣಿ ನಡೆಸಿದ್ದಾರೆ. ವಿರೋಧ ಪಕ್ಷದವರಿಗೆ ಯಾಕೆ ನಿದ್ದೆ ಬರುತ್ತಿಲ್ಲ ಎಂಬುದೂ ನನಗೆ ಗೊತ್ತಿದೆ. ವಿರೋಧ ಪಕ್ಷದವರು ರಾಜಕಾರಣ ಮಾಡಲಿ. ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.

Tags:
error: Content is protected !!