Mysore
30
overcast clouds

Social Media

ಮಂಗಳವಾರ, 11 ಆಗಸ್ಟ್ 2026
Light
Dark

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

by vijayendra

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌ ನಿಲುವು. ಅಬಕಾರಿ ಸಚಿವರ ರಾಜೀನಾಮೆ ಪಡೆದು ಆಮೇಲೆ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿಗಳಿಗೆ ಹಣ ಕ್ರೋಢೀಕರಿಸಲು ಸಾಧ್ಯವಾಗದೇ ಅಬಕಾರಿ ಇಲಾಖೆಯಲ್ಲಿ ಟಾರ್ಗೆಟ್‌ ಹೆಚ್ಚಿಸಿ ಕರ್ನಾಟಕವನ್ನು ಕುಡುಕರ ರಾಜ್ಯವಾಗಿ ಮಾಡುತ್ತಿದೆ ಎಂದು ಆರೋಪಿಸಿದರು.

ಕರ್ನಾಟಕವು ಕಾಂಗ್ರೆಸ್‌ ಹೈಕಮಾಂಡಿಗೆ ಎಟಿಎಂ ಆಗಿ ಪರಿವರ್ತನೆಯಾಗಿದೆ. ರಾಜೀನಾಮೆ ಕೊಡದಂತೆ ಅಬಕಾರಿ ಸಚಿವರ ಮೇಲೂ ಒತ್ತಡ ಇದೆ. ಅವರು ರಾಜೀನಾಮೆ ಕೊಟ್ಟರೆ ಅದು ಯಾರ್ಯಾರ ಬುಡಕ್ಕೆ ಬರುತ್ತದೋ ಗೊತ್ತಿಲ್ಲ. ಇಂದು ಕೂಡ ಬಿಜೆಪಿ-ಜೆಡಿಎಸ್‌ ಅಹೋರಾತ್ರಿ ಧರಣಿ ಮುಂದುವರಿಸುತ್ತೇವೆ ಎಂದು ಹೇಳಿದರು.

 

Tags:
error: Content is protected !!