Mysore
36
few clouds

Social Media

ಸೋಮವಾರ, 13 ಏಪ್ರಿಲ 2026
Light
Dark

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಏ.2ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಪರೀಕ್ಷಾ ದಿನಾಂಕ ಮತ್ತು ಫಲಿತಾಂಶದ ದಿನಾಂಕವನ್ನು ಸಾಕಷ್ಟು ಮುಂಚಿತವಾಗಿಯೇ ಪ್ರಕಟಿಸಿರುವುದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಿರಾಳತೆ ತಂದಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಲು ಮತ್ತು ಪರೀಕ್ಷೆಗೆ ಮಾನಸಿಕವಾಗಿ ಸಿದ್ಧರಾಗಲು ಸಹಕಾರಿಯಾಗಲಿದೆ.

ಮಾರ್ಚ್ 18ರಂದು ಪ್ರಥಮ ಭಾಷಾ ವಿಷಯಗಳೊಂದಿಗೆ ಪರೀಕ್ಷೆ ಆರಂಭವಾಗಲಿದ್ದು, ಏಪ್ರಿಲ್ 2ರಂದು ಕೋರ್ ಸಬ್ಜೆಕ್ಟ್ ಸಮಾಜ ವಿಜ್ಞಾನ ಪರೀಕ್ಷೆಯೊಂದಿಗೆ ಮುಕ್ತಾಯಗೊಳ್ಳಲಿದೆ. ರಾಜ್ಯಾದ್ಯಂತ ಸುಮಾರು 8.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದ್ದು, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಹದ್ದಿನ ಕಣ್ಣಿಡಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಸಾಮಾನ್ಯವಾಗಿ ಪರೀಕ್ಷೆ ಮುಗಿದು ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ದೀರ್ಘಕಾಲ ಕಾಯಬೇಕಾಗಿತ್ತು. ಆದರೆ, ಈ ಬಾರಿ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮಂಡಳಿ ನಿರ್ಧರಿಸಿದೆ. ಪರೀಕ್ಷೆ ಮುಗಿದ ತಕ್ಷಣವೇ ಏಪ್ರಿಲ್ ತಿಂಗಳಿನಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಮೇ 8 ರಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಂಡಳಿ ಸ್ಪಷ್ಟಪಡಿಸಿದೆ.

 

Tags:
error: Content is protected !!