Mysore
23
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ.

ಪ್ರಕರಣ ರದ್ದು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸುನಿಲ್‌ ದತ್‌ ಯಾದವ್‌ ಅವರಿದ್ದ ಹೈಕೋರ್ಟ್‌ ಪೀಠ ಆದೇಶ ಹೊರಡಿಸಿದೆ.

ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು. ಎಚ್.ಡಿ.ರೇವಣ್ಣ ಪರ ವಕೀಲರ ಮನವಿಗೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತು.

ಎಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೋರ್ಟ್‌ ತೆರವು ಮಾಡಿದೆ.

 

 

Tags:
error: Content is protected !!