Mysore
26
broken clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ ಶ್ರೀ ಆದಿಶಕ್ತಿ ಮಾರಮ್ಮ ಮಾರ್ಗವಾಗಿ ಸುಮಾರು ೫ ಕಿ.ಮೀ. ಪ್ರಯಾಣಿಸಲು ವಾಹನ ಸವಾರರು ಕೈಯಲ್ಲಿ ಜೀವ ಹಿಡಿದುಕೊಂಡು ಹೋಗುವುದು ಅನಿವಾರ್ಯವಾಗಿದೆ. ಬೇಸಿಗೆಯಲ್ಲಿ ರಸ್ತೆಯ ದೂಳಿನಿಂದ ಪ್ರಯಾಣಿಕರು ತೊಂದರೆಗೊಳಗಾಗುತ್ತಾರೆ. ಜಲಪಾತವನ್ನು ವೀಕ್ಷಿಸುವ ಸ್ಥಳವು ಸ್ವಚ್ಛತೆ ಇಲ್ಲದೆ ಗಬ್ಬು ನಾರುತ್ತಿದ್ದು, ಪ್ರವಾಸಿಗರು ಮೂಗು ಮುಚ್ಚಿಕೊಂಡೇ ಜಲಪಾತದ ಸೌಂದರ್ಯವನ್ನು ಸವಿಯುವಂತಾಗಿದೆ. ಸಂಬಂಧಪಟ್ಟ ಇಲಾಖೆಯವರು ಹಾಗೂ ಶಾಸಕರು ಕೂಡಲೇ ಭರಚುಕ್ಕಿ ಜಲಪಾತ ರಸ್ತೆಯನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.

– ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.

Tags:
error: Content is protected !!