Mysore
23
overcast clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೆಂಕಿ ಹೊತ್ತಿ ಉರಿದ ಬಸ್‌ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಶುಕ್ರವಾರ ನಸುಕಿನ ವೇಳೆ ಈ ಘಟನೆ ನಡೆದಿದ್ದು, ಬಸ್‌ನಲ್ಲಿದ್ದ 40 ಮಂದಿ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಪಾರಾಗಿದ್ದಾರೆ.

ಘಟನೆಯು ನೆಲಮಂಗಲ ಮತ್ತು ಡಾಬಸ್‌ಪೇಟೆ ನಡುವಿನ ಹನುಮಂತಪುರ ಗೇಟ್ ಬಳಿ ಎನ್‌ಎಚ್-48 ರಸ್ತೆಯಲ್ಲಿ ಸಂಭವಿಸಿದೆ. ಬಸ್ ಸುಮಾರು 30 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ಹೊರಟಿತ್ತು. ಪೊಲೀಸ್ ಮೂಲಗಳ ಪ್ರಕಾರ, ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿದೆ, ಬಳಿಕ ಕ್ಷಣಾರ್ಧದಲ್ಲಿ ಧಗಧಗನೆ ಉರಿಯಲಾರಂಭಿಸಿದೆ ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಅಧಿಕಾರಿಗಳ ಭೇಟಿ
ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಆದರೆ ಅಷ್ಟರಲ್ಲಾಗಲೇ ಬಸ್‌ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ಸಂಬಂಧ ಪೊಲೀಸ್‌ ತನಿಖೆ ಮುಂದುವರೆದಿದೆ.

 

Tags:
error: Content is protected !!